ಕರ್ನಾಟಕ ಪಬ್ಲಿಕ್ ಶಾಲೆಗಳ ಸ್ಥಾಪನೆ ಹಾಗೂ ಮೇಲ್ದರ್ಜೆಗೇರಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಡಿ 12 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ 1,000 ಸರ್ಕಾರಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪತ್ರ ಬರೆದಿದ್ದು, ಹೆಚ್ಚಿನ ದಾಖಲಾತಿ ಹೊಂದಿರುವ ಪ್ರಮುಖ ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಹಾಗೂ ಶೈಕ್ಷಣಿಕ ಸೌಲಭ್ಯಗಳ ಕೊರತೆ ನೀಗಿಸಲು ‘ನಮ್ಮ ಶಾಲೆ – ನಮ್ಮ ಜವಾಬ್ದಾರಿ’ ಅಭಿಯಾನದ ಮೂಲಕ ಸಾರ್ವಜನಿಕರ ಸಕ್ರಿಯ ಸಹಭಾಗಿತ್ವಕ್ಕೆ ಕೋರಿದ್ದಾರೆ. ಈ ಸಂಬಂಧ ನಾಳೆ ಬೆಳಿಗ್ಗೆ 11.00 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಲಿದೆ.


















