ಚಾಮರಾಜನಗರ: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿರುವ ಮಲೆ ಮಹದೇಶ್ವರ ಸ್ವಾಮಿ ದೇಗುಲದ ಹುಂಡಿ ಹಣ ಎಣಿಕೆ ಮುಕ್ತಾಯವಾಗಿದ್ದು, ಬರೋಬ್ಬರಿ 2.43 ಕೋಟಿ ರೂ. ಹಣ ಸಂಗ್ರಹವಾಗಿದೆ.
ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಮಲೆ ಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಇಂದು ಬೆಳಿಗ್ಗೆಯಿಂದ ನಡೆಯಿತು. 27 ದಿನಗಳಿಗೆ 2,43,65,775 ರೂ. ಸಂಗ್ರಹವಾಗಿದೆ ಎನ್ನಲಾಗಿದೆ. ಅಲ್ಲೇದ, 62 ಗ್ರಾಂ ಚಿನ್ನ, 2.5 ಕೆಜಿ ಬೆಳ್ಳಿ ಕಾಣಿಕೆಯಾಗಿವೆ ಬಂದಿವೆ.
ದೀಪಾವಳಿಯ ಜಾತ್ರೆಯ ಹಿನ್ನೆಲೆಯಲ್ಲಿ ಈ ಬಾರಿ ಲಕ್ಷಾಂತರ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು.