ಚಿತ್ರದುರ್ಗ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಹೀಗಾಗಿ ಜನ – ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥಗೊಂಡಿದೆ.
ಮನೆಗೋಡೆ ಕುಸಿದ (Wall Collapse) ಪರಿಣಾಮ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ (Chitradurga) ತಾಲೂಕಿನ ಈಚಲ ನಾಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಂಗಮ್ಮ(75) ಸಾವನ್ನಪ್ಪಿರುವ ವೃದ್ಧೆ. ವೃದ್ಧೆಯ ಮನೆ ಹಳೆಯದಾಗಿದ್ದು, ನಿರಂತರ ಮಳೆಗೆ ನೆನೆದು ಗೋಡೆ ಕುಸಿದಿದೆ. ಈ ಸಂದರ್ಭದಲ್ಲಿ ಮನೆಯೊಳಗಿದ್ದ ವೃದ್ಧೆ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಕ್ಷೇತ್ರದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಮೃತ ವೃದ್ಧೆ ಕುಟುಂಬಕ್ಕೆ ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್ ಮಾರ್ಗಸೂಚಿಯಂತೆ ಪ್ರಕೃತಿ ವಿಕೋಪ ನಿಧಿಯಿಂದ 4 ಲಕ್ಷ ರೂ. ಮತ್ತು ಹೆಚ್ಚುವರಿಯಾಗಿ 1 ಲಕ್ಷ ರೂ. ಸೇರಿದಂತೆ ಒಟ್ಟು 5 ಲಕ್ಷ ರೂ. ಹಣ ವಿತರಿಸಿದರು.