ಬಾಗಲಕೋಟೆ : ಘಟಪ್ರಭಾ ನದಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ನಿಂಗಾಪುರ ಗ್ರಾಮದ ಸಮೀಪ ಘಟಪ್ರಭಾ ನದಿಯಲ್ಲಿ ನಡೆದಿದೆ.
ಸುಮಾರು 30 ವರ್ಷ ವಯಸ್ಸಿನ ವ್ಯಕ್ತಿಯ ಶವ ನದಿಯಲ್ಲಿ ತೇಲುತ್ತಿರುವುದನ್ನು ಸ್ಥಳೀಯರು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಕಲಾದಗಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಶವದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ನಿಖರ ಕಾರಣ ತಿಳಿದುಬರಬೇಕಿದೆ.
ಈ ಸಂಬಂಧ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತನ ಗುರುತು ಪತ್ತೆ ಹಾಗೂ ಪ್ರಕರಣದ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ.


















