ಬೆಳ್ತಂಗಡಿ : ತನ್ನ ಮಗಳು ಅನನ್ಯಾ ಭಟ್ ವರ್ಷಗಳ ಹಿಂದೆ ಧರ್ಮಸ್ಥಳ ಗ್ರಾಮದಲ್ಲಿ ನಾಪತ್ತೆಯಾಗಿದ್ದಾಳೆ ಎಂದು ದೂರು ನೀಡಿರುವ ಸುಜಾತಾ ಭಟ್ ಅವರ ವಿಚಾರಣೆ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ಮುಂದುವರಿಯಿತು. ಈ ಮೂಲಕ ಅವರ ವಿಚಾರಣೆ ಸತತ ಐದನೇ ದಿನಕ್ಕೆ ಕಾಲಿಟ್ಟಿತು.
‘ಸುಜಾತಾ ಭಟ್ ತನಿಖಾ ತಂಡದ ಹಾದಿ ತಪ್ಪಿಸಿರುವುದು ಅಥವಾ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿರುವುದು ವಿಚಾರಣೆಯಲ್ಲಿ ಸಾಬೀತಾದರೆ ಅದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಮುಂದಿನದ್ದೆಲ್ಲವೂ ನ್ಯಾಯಾಲಯದಲ್ಲಿ ನಿರ್ಧಾರ ಆಗಲಿದೆ’ ಎಂದು ಎಸ್‌ಐಟಿ ಮೂಲಗಳು ತಿಳಿಸಿವೆ.



















