ಆನೇಕಲ್: ಅಪ್ರಾಪ್ತ ಬಾಲಕಿಯೊಂದಿಗೆ ಮದುವೆ (Marriage)ಯಾಗಲು ಯತ್ನಿಸಿದ್ದ ಯುವಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಆನೇಕಲ್ ಪೋಲಿಸ್ ಠಾಣಾ (Anekal Police Station) ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕೋರಮಂಗಲ (Koramangala) ಮೂಲದ ನಿವಾಸಿ ಸೊಸೆರಾಜು ಬಂಧಿತ ಆರೋಪಿ. ಬೆಂಗಳೂರಿನ ಕೋರಮಂಗಲದಲ್ಲಿರುವ ಅಜ್ಜಿಯ ಮನೆಗೆಂದು ಬಂದಿದ್ದ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ, ಮದುವೆಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ.
ಅಪ್ರಾಪ್ತೆಯ ತಂದೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಮಗಳು ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಕೂಡಲೇ ಎಚ್ಚೆತ್ತ ಪೊಲೀಸರು ಆರೋಪಿ ಬಂಧಿಸಿದ್ದಾರೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.