ಬೆಂಗಳೂರು: ಪೊಲೀಸರ ಹೆಸರು ಹೇಳಿಕೊಂಡು ಯುವಕ- ಯುವತಿಯರಿಗೆ ಕಿರುಕುಳ ನೀಡುತ್ತಿದ್ದ ನಕಲಿ ಪೊಲೀಸ್ ನನ್ನು ಅಸಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಜಯನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆಸೀಫ್ ಬಂಧಿತ ಆರೋಪಿ. ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದ ಆಸೀಫ್ ಪೊಲೀಸ್ ಎಂದು ಹೇಳಿಕೊಂಡು ಬಂದು ಹಣ ವಸೂಲಿ ಮಾಡುತ್ತಿದ್ದ. ಪಾರ್ಕ್‌ನಲ್ಲಿರುವವರನ್ನು ಟಾರ್ಗೆಟ್ ಮಾಡಿ ಹಣ ದೋಚುತ್ತಿದ್ದ ಎನ್ನಲಾಗಿದೆ.
12 ಗ್ರಾಂನ ಚಿನ್ನದ ಸರ ಹಾಗೂ 5 ಗ್ರಾಂನ ರಿಂಗ್ ಹಾಗೂ 10 ಸಾವಿರ ರೂ. ಹಣ ಡ್ರಾ ಮಾಡಿಸಿಕೊಂಡು ಪರಾರಿಯಾಗಿದ್ದ ಎನ್ನಲಾಗಿದೆ. ಈತ ಈ ರೀತಿ ಸಾಕಷ್ಟು ಕೃತ್ಯ ಎಸಗಿದ್ದಾನೆಂದು ತಿಳಿದು ಬಂದಿದೆ. ಸದ್ಯ ವಶಕ್ಕೆ ಪಡೆದಿರುವ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.