ಚಳ್ಳಕೆರೆ: ನಗರದಲ್ಲಿ ಅಂಗಡಿಗೆ ನುಗ್ಗಿ ಕಳ್ಳತನ ಮಾಡುತ್ತಿದ್ದ ವೇಳೆ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಚಳ್ಳಕೆರೆ ನಗರದ ಪಾವಗಡ ರಸ್ತೆಯಲ್ಲಿನ ಪ್ರಿಯಾಂಕ್ ಪ್ರಾವಿಜನ್ ಸ್ಟೋರ್ ಬಾಗಿಲು ಮುರಿದು ಒಳ ನುಗ್ಗಿದ್ದ ಖದೀಮರು, ಕಳ್ಳತನ ಮಾಡುವಾಗಲೇ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶುಕ್ರವಾರ ರಾತ್ರಿ ವೇಳೆ ಗಸ್ತಿನ ಕರ್ತವ್ಯದಲ್ಲಿದ್ದ ಪೋಲಿಸರು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕಳ್ಳತನಕ್ಕೆ ಬಂದಿರುವುದು ಗೊತ್ತಾಗಿದೆ.
ಕ್ಯಾತಗೊಂಡನಹಳ್ಳಿ ಗ್ರಾಮದ ಮುರಳಿ(28) ಹಾಗೂ ಮೂರ್ಖಣ್ಣ(33) ಬಂಧಿತರು. ಬಂಧಿತರಿಬ್ಬರು ಬೇಕರಿಯಲ್ಲಿ ಕೇಕ್ ತಯಾರು ಮಾಡುತ್ತಿದ್ದರು ಎಂಬ ಮಾಹಿತಿ ತನಿಖೆಯಿಂದ ಬಯಲಾಗಿದೆ. ಈ ಕುರಿತು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎನ್ನಲಾಗಿದೆ.