ಬೆಂಗಳೂರು: ಆಂಧ್ರ ಪ್ರದೇಶ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಇಂದು ಬೆಳಗಿನ ಜಾವ ಅಪಘಾತಕ್ಕೀಡಾದ ಘಟನೆ ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿ ನಡೆದಿದೆ.
ಅಧೋನಿಯಿಂದ ಅನಂತಪುರ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಬಸ್, ವೇಗವಾಗಿ ಚಲಿಸುತ್ತಿದ್ದ ವೇಳೆ ರಸ್ತೆ ಡಿವೈಡರ್‌ಗೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ಹಾನಿಗೊಳಗಾಗಿದ್ದು, ಮುಂಭಾಗದ ಚಕ್ರ ಮತ್ತು ಎಂಜಿನ್ ಕಿತ್ತು ಬಿದ್ದಿವೆ.
ಘಟನೆ ಕುರಿತು ಮಾಹಿತಿ ನೀಡಿದ ಚಾಲಕ, “ಶಿವಾನಂದ ಸರ್ಕಲ್ ಬಳಿ ಬರುವಾಗ ಬಸ್‌ನ ಎಡಭಾಗದಲ್ಲಿ ಆಟೋ ಬಂದಿತ್ತು. ಅದನ್ನು ತಪ್ಪಿಸಲು ಬಲಭಾಗಕ್ಕೆ ತಿರುಗಿಸಿದಾಗ ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ” ಎಂದು ತಿಳಿಸಿದ್ದಾರೆ.
ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಸುರಕ್ಷಿತರಾಗಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಇದೇ ಮಾರ್ಗದಲ್ಲಿ ಬಸ್ ಚಾಲನೆ ಮಾಡುತ್ತಿದ್ದೇನೆ ಎಂದು ಚಾಲಕ ಹೇಳಿದ್ದಾರೆ.
ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಪೊಲೀಸ್ ಸಿಬ್ಬಂದಿ ಆಗಮಿಸಿ, ಡಿವೈಡರ್‌ಗೆ ಸಿಲುಕಿದ್ದ ಬಸ್ ಅನ್ನು ಹೊರತೆಗೆದು ರಸ್ತೆ ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ್ದು, ಹೆಚ್ಚಿನ ತನಿಖೆ ಮುಂದುವರೆದಿದೆ.
ಇದನ್ನೂ ಓದಿ : ಹಿಂದೂ ದೇವರಿಗೆ ಅನ್ಯ ರಾಜ್ಯದ ಯುವಕನಿಂದ ಅವಮಾನ – ಆಕ್ರೋಶಗೊಂಡ ನೆಟ್ಟಿಗರು


















