ಆಂಧ್ರ ಹಾಗೂ ತೆಲಂಗಾಣದಲ್ಲಿ ವ್ಯಾಪಕ ಮಳೆಯಿಂದಾಗಿ ಪ್ರವಾಹ ಉಂಟಾಗಿದೆ. ಹೀಗಾಗಿ ಹಲವಾರು ಅಮಾಯಕರು ಬಲಿಯಾಗಿದ್ದು, ಜನ -ಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಹೀಗಾಗಿ ಸೆಲೆಬ್ರಿಟಿಗಳು, ಶ್ರೀಮಂತರು ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ನಟ ಹಾಗೂ ರಾಜಕಾರಣಿ ಪವನ್ ಕಲ್ಯಾಣ್ 6 ಕೋಟಿ ರೂ. ದೇಣಿಗೆ ನೀಡಿದ್ದಾರೆ.
ನಟ ಚಿರಂಜೀವಿ, ರಾಮ್ ಚರಣ್, ಪ್ರಭಾಸ್, ಅಲ್ಲು ಅರ್ಜುನ್ ಸೇರಿದಂತೆ ಹಲವಾರು ಸೆಲೆಬ್ರಿಟಿಗಳು ಈಗಾಗಲೇ ಸಂತ್ರಸ್ತರಿಗಾಗಿ ದೇಣಿಗೆ ನೀಡಿದ್ದಾರೆ. ಈಗ ನಟ ಹಾಗೂ ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ 6 ಕೋಟಿ ರೂ. ಪರಿಹಾರ ನೀಡಿದ್ದಾರೆ.
ಇತ್ತೀಚೆಗೆ ಪವನ್ ಕಲ್ಯಾಣ್ ಅವರು ಆಂಧ್ರ ಮತ್ತು ತೆಲಂಗಾಣ ಸಿಎಂ ಪರಿಹಾರ ನಿಧಿಗೆ ತಲಾ ಒಂದು ಕೋಟಿ ರೂ. ನೀಡುವುದಾಗಿ ಹೇಳಿದ್ದರು. ಆದರೆ, ಪ್ರವಾಹದಿಂದ ಸಾಕಷ್ಟು ಜನರ ಬದುಕು ಬೀದಿಗೆ ಬಂದಿರುವುದನ್ನು ಕಣ್ಣಾರೆ ಕಂಡು 6 ಕೋಟಿ ರೂ. ದೇಣಿಗೆ ನೀಡಿದ್ದಾರೆ.
1 ಕೋಟಿ ರೂ. ನಿಂದ ಏನೂ ಸಾಧ್ಯವಾಗುವುದಿಲ್ಲ. ಹೀಗಾಗಿ 4 ಕೋಟಿ ರೂ. ನೀಡಲಿದ್ದೇನೆ’ ಎಂದು ಪವನ್ ಕಲ್ಯಾಣ್ ಹೇಳಿದ್ದಾರೆ.