ಆನೇಕಲ್: ಪಟ್ಟಣದ ಮಿರ್ಜಾ ರಸ್ತೆಯಲ್ಲಿ ಅಜಾಗರೂಕ ಕಾರು ಚಾಲನೆಯಿಂದ ಭಾರೀ ಅಪಘಾತ ಸಂಭವಿಸಿದೆ. ನಿನ್ನೆ ಮಧ್ಯಾಹ್ನ ಸುಮಾರು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ರಸ್ತೆಯಲ್ಲಿ ಬೇಕಾಬಿಟ್ಟಿಯಾಗಿ ವೇಗವಾಗಿ ಚಲಿಸುತ್ತಿದ್ದ ಕಾರು, ರಸ್ತೆ ಬದಿಯಲ್ಲಿ ನಿಂತಿದ್ದ ಹಲವು ಬೈಕ್‌ಗಳಿಗೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಬೈಕ್‌ಗಳು ಹಾನಿಗೊಳಗಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನೆಯ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರು ನಿಯಂತ್ರಣ ತಪ್ಪಿ ನೇರವಾಗಿ ನಿಂತಿದ್ದ ವಾಹನಗಳಿಗೆ ಡಿಕ್ಕಿ ಹೊಡೆಯುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಕಾರಿನಲ್ಲಿ ಮೂರು ಜೋಡಿಗಳು ಸೇರಿ ಆರು ಮಂದಿ ಇದ್ದರು ಎನ್ನಲಾಗಿದ್ದು, ಪಾರ್ಟಿ ಮುಗಿಸಿ ವೇಗವಾಗಿ ಕಾರು ಚಲಾಯಿಸಿದ್ದಾರೆಯೆಂಬ ಶಂಕೆ ವ್ಯಕ್ತವಾಗಿದೆ. ಅಪಘಾತದ ನಂತರ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ NCB ಅಧಿಕಾರಿಗಳು ದಾಳಿ | ವಿದೇಶಿ ಪ್ರಯಾಣಿಕನಿಂದ 23.88 ಕೋಟಿ ರೂ. ಮೌಲ್ಯದ ಕೊಕೇನ್ ಜಪ್ತಿ



















