ಮೈಸೂರು ಸ್ಯಾಂಡಲ್ ಸೋಪ್ಗೆ ಮಿಲ್ಕಿ ಬ್ಯೂಟಿ ತಮನ್ನಾ ಅವರನ್ನು ದುಬಾರಿ ಮೊತ್ತಕ್ಕೆ ರಾಯಭಾರಿಯಾಗಿ ಆಯ್ಕೆ ಮಾಡಲಾಗಿತ್ತು. ತಮನ್ನಾ ಆಯ್ಕೆಯನ್ನು ವಿರೋಧಿಸಿ ಸ್ಯಾಂಡಲ್‌ವುಡ್ ನಟ ನಟಿಯರು ಕನ್ನಡಪರ ಹೋರಾಟಗಾರರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಪಡೆಯದೆ ರಾಜ್ಯದ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ಅವರ ಸಮಾಜಮುಖಿ ಧೋರಣೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
ಈ ವಿಚಾರವಾಗಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ. ಅರಣ್ಯ ಮತ್ತು ಪರಿಸರ ಸಂರಕ್ಷಣೆಯ ಹಿತಾಸಕ್ತಿಯಿಂದ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ, ಖ್ಯಾತ ಕ್ರಿಕೆಟಿಗ ಮತ್ತು ಮಾಜಿ ಭಾರತ ಕ್ರಿಕೆಟ್ ತಂಡದ ನಾಯಕರಾದ ಅನಿಲ್ ಕುಂಬ್ಳೆ ಅವರನ್ನು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ರಾಯಭಾರಿಯಾಗಿ ನಾಮನಿರ್ದೇಶಿಸಲು ನಿರ್ಧರಿಸಿದ್ದೇವೆ. ಕುಂಬ್ಳೆ ಅವರು ಇತ್ತೀಚೆಗೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ವನ್ಯಜೀವಿಗಳ ಮೇಲಿನ ಅಪಾರ ಕಾಳಜಿ, ಅರಣ್ಯದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅವರು ಹೊಂದಿರುವ ಖ್ಯಾತಿಯಿಂದಾಗಿ ಅವರು ಈ ಜವಾಬ್ದಾರಿಗೆ ಅತ್ಯಂತ ಸೂಕ್ತ ವ್ಯಕ್ತಿಯಾಗಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.
“ಶಾನ್ ಮಸೂದ್, ಭಾರತದ ನಾಯಕ” : ಕಾಮೆಂಟರಿ ವೇಳೆ ದಕ್ಷಿಣ ಆಫ್ರಿಕಾದ ದಿಗ್ಗಜ ಶಾನ್ ಪೊಲಾಕ್ ಅವರಿಂದ ಮಹಾ ಪ್ರಮಾದ!