ಬೆಂಗಳೂರು ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ.
ದೇವಾಲಯದ ಆಡಳಿತ ಮಂಡಳಿ ಈಗ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಸಜ್ಜಾಗಿದೆ. ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ.
ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.