ಬಳ್ಳಾರಿ: ಇಲ್ಲಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುಮಹಯ್ಯ ಎನ್ನುವ ಬಾಣಂತಿ ಸಾವನ್ನಪ್ಪಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನ. 10ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇವರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಈಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಒಂದೇ ದಿನ ಹೆರಿಗೆಯಾದವರ 7 ಬಾಣಂತಿಯರ ಪೈಕಿ ಐವರು ಸಾವನ್ನಪ್ಪಿದ್ದಾರೆ.
ಕಿಡ್ನ ಸಮಸ್ಯೆಯಿಂದ ಬಳಲುತ್ತಿದ್ದ ಸುಮಹಯ್ಯ ಎಂಬುವವರಿಗೆ ಡಯಾಲಿಸಸ್ ಮಾಡಲಾಗುತ್ತಿತ್ತು. ಆದರೆ, ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್‌ನಿಂದಲೇ ಅವರು ಸಾವು ಕಂಡಿದ್ದಾರೆ ಎಂಬ ಮಾಹಿತಿ ಕೂಡ ಹೊರ ಬಿದ್ದಿದೆ.
ಇತ್ತೀಚೆಗೆ ಸಾವನ್ನಪ್ಪಿದ ನಾಲ್ವರು ಬಾಣಂತಿಯರಿಗೆ ಐವಿ ದ್ರಾವಣ ನೀಡಿದ್ದೇ ಸಾವಿಗೆ ಕಾರಣ ಎನ್ನಲಾಗಿದೆ. ಹೀಗಾಗಿ ಐವಿ ಫ್ಲ್ಯೂಡ್ಸ್ ನೀಡುವುದನ್ನು ಸ್ಥಗಿತಗೊಳಿಸಲಾಗಿತ್ತು. ತನಿಖಾ ವರದಿಯಲ್ಲಿ ಕಳಪೆ ದ್ರಾವಣ ಬಗ್ಗೆ ಉಲ್ಲೇಖವಾಗಿದೆ. ಕಳಪೆ ಗ್ಲೂಕೋಸ್ನಿಂದ ಬಾಣಂತಿಯರ ಸಾವಾಗಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ. ಬಾಣಂತಿಯರ ಸಾವಿನಿಂದಾಗಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.