ಸೂರತ್ ನಲ್ಲಿ ಕಟ್ಟಡ ಕುಸಿದ ಘಟನೆ ನಡೆದ ಬೆನ್ನಲ್ಲಿಯೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಜಾರ್ಖಂಡ್ ನ ಡಿಯೋಗಢದಲ್ಲಿ ಈ ಘಟನೆ ನಡೆದಿದೆ.
ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೇ ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದೆ. ರಕ್ಷಣಾ ಕಾರ್ಯಾಚರಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ನಿಯೋಜಿಸಲಾಗಿದೆ.
ಕುಸಿದು ಬಿದ್ದ ಕಡ್ಡಡ ಎರಡು ಅಂತಸ್ತಿನ ಕಟ್ಟಡ ಎನ್ನಲಾಗಿದೆ. ಘಟನೆಯಲ್ಲಿ ಇಲ್ಲಿಯವರೆಗೆ ನಾಲ್ವರನ್ನು ರಕ್ಷಿಸಲಾಗಿದೆ. ಅಲ್ಲದೇ, ಇನ್ನೂ ಕೆಲವರು ಅವಶೇಷಗಳ ಅಡಿ ಸಿಲುಕಿದ್ದಾರೆ ಎನ್ನಲಾಗಿದೆ. ಈಗಾಗಲೇ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ರಕ್ಷಿಸಿದ ವ್ಯಕ್ತಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರ್ಯಾಚರಣೆಯ ನೇತೃತ್ವ ವಹಿಸಿರುವ ಎನ್‌ಡಿಆರ್‌ಎಫ್ ಇನ್ಸ್‌ಪೆಕ್ಟರ್ ರಣಧೀರ್ ಕುಮಾರ್, ಸಿಲುಕಿದವರನ್ನು ಹೊರತರುವ ಪ್ರಯತ್ನ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಗುಜರಾತ್ ನ ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 7 ಜನ ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ಈ ಘಟನೆ ನಡೆದಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.