ಬೆಂಗಳೂರು : RCB ಅಭಿಮಾನಿಗಳಿಗೆ ಮತ್ತೊಂದು ಗುಡ್‌ನ್ಯೂಸ್ ಸಿಕ್ಕಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ಕಲ್ಪಿಸಲಾಗಿದೆ. ಈ ಸಂಬಂಧ ಆರ್‌ಸಿಬಿ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ.
ಇದೇ ಮಾರ್ಚ್ 28 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎಸ್‌ಆರ್‌ಹೆಚ್ ವಿರುದ್ಧ ಆರ್‌ಸಿಬಿ ಉದ್ಘಾಟನಾ ಪಂದ್ಯವನ್ನು ಆಡಲಿದೆ. ಅಲ್ಲದೇ, ಏಪ್ರಿಲ್ 5 ರಂದು ಸಿಎಸ್‌ಕೆ ವಿರುದ್ಧ ಇದೇ ಕ್ರೀಡಾಂಗಣದಲ್ಲಿ ಸೆಣಸಲಿದೆ. ತವರಿನಲ್ಲಿ ಎರಡು ಪಂದ್ಯಗಳನ್ನು ಆರ್‌ಸಿಬಿ ಆಡಲಿದೆ.
ಪಂದ್ಯದ ಟಿಕೆಟ್ ತೋರಿಸುವ ಮೂಲಕ ಅಭಿಮಾನಿಗಳು ಸ್ಟೇಡಿಯಂಗೆ ಹೋಗಲು ಮತ್ತು ಬರಲು ಮೆಟ್ರೋ ಬಳಸಬಹುದು. ಸ್ಟೇಡಿಯಂ ಸುತ್ತಮುತ್ತ ಉಂಟಾಗುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ತಿಳಿದುಬಂದಿದೆ.
ಈ ಕ್ರಮವನ್ನು ಜಾರಿಗೆ ತರುವ ಉದ್ದೇಶದಿಂದ ಬಿಎಂಆರ್‌ಸಿಎಲ್ ಜೊತೆಗೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ಚರ್ಚೆ ನಡೆಸಿತ್ತು. ಮಾತುಕತೆ ಫಲಪ್ರದವಾಗಿದ್ದು, ಪಂದ್ಯ ವೀಕ್ಷಿಸಲು ಸ್ಟೇಡಿಯಂಗೆ ಹೋಗುವವರಿಗೆ ಮೆಟ್ರೋ ಪ್ರಯಾಣ ಉಚಿತ ಇರಲಿದೆ.
ಇದನ್ನೂ ಓದಿ : ಚಿನ್ನದಂಗಡಿಯಲ್ಲಿಯೇ 49 ಗ್ರಾಂ ಚಿನ್ನದ ಸರ ಎಗರಿಸಿದ ಸೇಲ್ಸ್ ಗರ್ಲ್!



















