ಬೆಂಗಳೂರು: ಆರ್ ಸಿಬಿ ಫ್ಯಾನ್ಸ್ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ. ಅಧಿಕಾರಿಗಳ ಅಭಿಪ್ರಾಯವನ್ನೂ ಕೇಳದೆ ರಾಜ್ಯ ಸರ್ಕಾರ ಗಾಳಿಗೆ ತೂರಿದೆ ಎಂಬ ಆರೋಪ ಕೇಳಿ ಬಂದಿದೆ.
ಆರ್ ಸಿಬಿ ಆಟಗಾರರಿಗೆ ಆಯೋಜನೆ ಮಾಡಬೇಕಾಗಿದ್ದ ಕಾರ್ಯಕ್ರಮದ ಅನುಮತಿ ಪತ್ರ ಒಂದು ದಿನ ತಡವಾಗಿ ಬೆಳಕಿಗೆ ಬಂದಿದೆ. ಇದನ್ನು ಗಮನಿಸಿದರೆ ಸರ್ಕಾರದ ನಡೆ ಹಲವಾರು ಅನುಮಾನಗಳಿಗೆ ಕಾರಣವಾಗಿದೆ.
ಕಾರ್ಯಕ್ರಮದ ಅಯೋಜನೆ ಬಗ್ಗೆ ಮುನ್ನೆಚ್ಚರಿಕೆ ಅವಶ್ಯಕತೆ ಇದ್ದರೂ ಸರ್ಕಾರ ತರಾತುರಿಯಲ್ಲಿ ಕಾರ್ಯಕ್ರಮ ಅಯೋಜನೆ ಮಾಡಿತ್ತಾ? ಜೂನ್ 4ರಂದು ಚಿನ್ನಸ್ವಾಮಿ ಸ್ಟೇಡಿಯಂಗೆ ತಲುಪಬೇಕಿದ್ದ ಪತ್ರ, ಜೂ. 5ರಂದು ತಲುಪಿದೆ.ಈ ವಿಳಂಬ ನೀತಿಗೆ ಕಾರಣ ಯಾರು? ಎಂಬ ಪ್ರಶ್ನೆ ಮುನ್ನಲೆಗೆ ಬಂದಿದೆ.