ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಭೀಕರ ಹತ್ಯೆಯೊಂದು ಬೆಳಕಿಗೆ ಬಂದಿದ್ದು, ಇಡೀ ನಗರ ಬೆಚ್ಚಿ ಬೀಳುವಂತಿದೆ.
ವ್ಯಕ್ತಿಯೊಬ್ಬ ಹೆಂಡತಿಯನ್ನು ಹತ್ಯೆ ಮಾಡಿ ಸೂಟ್ ಕೇಸ್ ನಲ್ಲಿ ತುಂಬಿ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಈ ಘಟನೆ ದೊಡ್ಡಕಮ್ಮನಹಳ್ಳಿಯ ವಾಲ್ ಮಾರ್ಕ್ ಅಪಾರ್ಟ್ಮೆಂಟ್ ಮುಂಭಾಗದಲ್ಲಿ ನಡೆದಿದೆ.
ಕಳೆದ ಮೂರು ದಿನಗಳ ಹಿಂದೆ ಈ ಹತ್ಯೆ ನಡೆದಿದೆ ಎನ್ನಲಾಗಿದೆ. ಇಂದು ಅಕ್ಕ ಪಕ್ಕದ ಮನೆಯವರಿಗೆ ವಾಸನೆ ಬಂದ ಹಿನ್ನೆಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪತ್ನಿಯನ್ನು ಹತ್ಯೆ ಮಾಡಿ ಪೀಸ್ ಪೀಸ್ ಮಾಡಿದ ನಂತರ ಸೂಟ್ ಕೇಸ್ ನಲ್ಲಿ ತುಂಬಿ ಗಂಡ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಕೊಲೆಯಾದ ಮಹಿಳೆ ಹಾಗೂ ಪತಿ ಮಹಾರಾಷ್ಟ್ರ ಮೂಲದವರು ಎನ್ನಲಾಗಿದೆ. ಕಳೆದ ಮೂರು ವರ್ಷಗಳಿಂದ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುತ್ತಿದ್ದರು. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.