ಮಂಗಳೂರು: ಮತ್ತೋರ್ವ ಹಿಂದೂ ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿರುವ ಘಟನೆ ನಡೆದಿದೆ.
ಈ ಘಟನೆ ಮಂಗಳೂರಿನ (Mangaluru) ಬಜ್ಪೆ ಕಿನ್ನಿಪದವು ಹತ್ತಿರ ನಡೆದಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ಹಿಂದೂ ಕಾರ್ಯಕರ್ತ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಗೆ ಪ್ರತೀಕಾರವಾಗಿ 2022ರ ಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು.
ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದ. ಸಹಾಸ್ ಶೆಟ್ಟಿ ವಿರುದ್ಧ ಹಲವು ಕೊಲೆ, ಕೊಲೆಯತ್ನ ಕೇಸ್ಗಳು ದಾಖಲಾಗಿದ್ದವು. ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.