ಮೈಸೂರು : ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿ ಗ್ರಾಮದಲ್ಲಿ ಮತ್ತೊಂದು ಚಿರತೆ ಬೋನಲ್ಲಿ ಲಾಕ್ ಆಗಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.
ಗುರು ಮಲ್ಲೇಶ್ವರ ಸ್ವಾಮಿ ಗದ್ದುಗೆ ಬಳಿ ಚಿರತೆ ಬೋನಿಗೆ ಬಿದ್ದಿದೆ. ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆ ಇದಾಗಿದ್ದು, ಇದರ ಉಪಟಳದಿಂದ ಗ್ರಾಮದ ಜನರು ಬಾರೀ ಆತಂಕಕ್ಕೊಳಗಾಗಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಚಿರತೆಯನ್ನು ಹಿಡಿದಿದ್ದು, ಸುರಕ್ಷಿತ ಸ್ಥಳಕ್ಕೆ ರವಾನಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿ | ಬೀದಿ ನಾಯಿಗಳ ಡೆಡ್ಲಿ ಅಟ್ಯಾಕ್‌ಗೆ ಬೆಚ್ಚಿಬಿದ್ದ ಜನ



















