ಚಿಕ್ಕಬಳ್ಳಾಪುರ: ಸಿಎನ್ ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ ಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಹುನೇಗಲ್ ಗ್ರಾಮದ ಹತ್ತಿರ ನಡೆದಿದೆ. ಗ್ಯಾಸ್ ಸಿಲಿಂಡರ್ ಲಾರಿಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದಿದೆ. ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಗಾಯಗೊಂಡಿದ್ದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ಸಿಎನ್ ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮೆಗಳನ್ನು ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್ ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಹೀಗಾಗಿ ದೊಡ್ಡ ಸ್ಫೋಟ ಸಂಭವಿಸಿದೆ. ಇದನ್ನು ಕಂಡು ಜನರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.