ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೆ ಮತ್ತೋರ್ವ ಮಾಲಾಧಾರಿ ಸಾವನ್ನಪ್ಪಿದ್ದಾರೆ. ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಲಿಂಗರಾಜ ಬೀರನೂರ(19) ಸಾವನ್ನಪ್ಪಿರುವ ಮಾಲಾಧಾರಿ. ಘಟನೆಯಲ್ಲಿ ಗಾಯಗೊಂಡಿರುವ ಇನ್ನುಳಿದ ಐವರಿಗೆ ಚಿಕಿತ್ಸೆ ಮುಂದುವರೆದಿದೆ.
ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿ ಗಾಯಗೊಂಡಿದ್ದರು. 9 ಜನರ ಪೈಕಿ ನಿನ್ನೆ ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (18) ಇಬ್ಬರು ಮಾಲಾಧಾರಿಗಳು ಸಾವನ್ನಪ್ಪಿದ್ದರು. ಇಂದು ಬೆಳಗ್ಗೆ ರಾಜು ಮೂಗೇರಿ ಸಾವನ್ನಪ್ಪಿದ್ದ. ಈಗ ಲಿಂಗರಾಜ ಬೀರನೂರು ಸಾವನ್ನಪ್ಪಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಘೋರ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಣಮಿಸಿತ್ತು. ಹೀಗಾಗಿ ಬೆಂಗಳೂರಿನಿಂದ ತಜ್ಞ ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಇನ್ನುಳಿದ ಐವರಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನುಳಿದ ಐವರ ಸ್ಥಿತಿ ಕೂಡ ಗಂಭೀರವಾಗಿದೆ. ವೈದ್ಯರು ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.