ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಲಾರಿ ಮುಷ್ಕರ ಆರಂಭವಾಗಿದೆ. ಇಂದು ಬೆಳಗ್ಗೆ 9 ಗಂಟೆಯಿಂದಲೇ ಲಾರಿ ಮುಷ್ಕರ ಆರಂಭವಾಗಿದೆ.
ಅನ್ನಭಾಗ್ಯ ಅಕ್ಕಿ ಸಾಗಣೆ ವೆಚ್ಚ ನೀಡದ ಸರ್ಕಾರ ವಿರುದ್ಧ ಸಾಗಣೆದಾರರು ಆಕ್ರೋಶ ಹೊರಹಾಕಿದ್ದಾರೆ. ಜುಲೈ 5ರೊಳಗೆ ಬಾಕಿ ವೇತನ 250 ಕೋಟಿ ರೂ. ಹಣ ಬಿಡುಗಡೆ ಮಾಡದಿದ್ದಲ್ಲಿ ಲಾರಿ ಮುಷ್ಕರ ಕೈಗೊಳ್ಳಲಾಗಿದೆ ಎಂದು ಸಂಘಟನೆ ಎಚ್ಚರಿಕೆ ನೀಡಿತ್ತು. ಜು. 5 ಕಳೆದರೂ ಬಾಕಿ ಇರುವ ಮೊತ್ತ ಪಾವತಿಯಾಗದ ಹಿನ್ನೆಲೆಯಲ್ಲಿ ಲಾರಿ ಮಷ್ಕರಕ್ಕೆ ಚಾಲನೆ ನೀಡಲಾಗಿದೆ.
ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘ ಎಚ್ಚರಿಕೆ ನೀಡಿತ್ತು. ಪ್ರತಿ ತಿಂಗಳು ಅಕ್ಕಿ ಸಾಗಾಣಿಕೆ ಹಣ ವಿತರಣೆ ಆಗುತ್ತಿತ್ತು. ಆದರೇ ಈಗ ಐದು ತಿಂಗಳುಗಳು ಕಳೆದರೂ ಬಾಕಿ ಮೊತ್ತ ಇನ್ನೂ ಪಾವತಿಯಾಗಿಲ್ಲ. ಬಾಕಿ ಹಣ ಕೊಡದೆ ಹೋದಲ್ಲಿ ನಾವು ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವುದಿಲ್ಲ ಎಂದು ಸಂಘಟನೆಗೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಹಳ ದೊಡ್ಡ ಹೊಡೆತ ನೀಡಿದೆ.
ಫೆಬ್ರವರಿ – ಮೇ ತಿಂಗಳ ವರೆಗಿನ 250 ಕೋಟಿ ಬಾಕಿ ಹಣ ಇನ್ನೂ ಪಾವತಿಯಾಗಿಲ್ಲ. 4 ಸಾವಿರ ಲಾರಿಗಳು ಅನ್ನಭಾಗ್ಯ ಅಕ್ಕಿ ಲಾರಿ ಮೂಲಕ ಸರಬರಾಜು ಮಾಡಲಾಗುತ್ತದೆ. ಬರಬೇಕಿದ್ದ ಬಾಕಿ ಹಣವನ್ನು ಸರ್ಕಾರ ಬಿಡುಗಡೆ ಮಾಡಬೇಕಿತ್ತು. ಸಂಘಟನೆ ನೀಡಿದ ಡೆಡ್ ಲೈನ್ ಮುಗಿದಿದ್ದರೂ ಬಿಡುಗಡೆ ಮಾಡಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರ ಕೈಗೊಳ್ಳಲಾಗಿದೆ.