ಬೆಂಗಳೂರು: ನಾಳೆಯಿಂದ ಜನರಿಗೆ ಬೆಲೆ ಏರಿಕೆಯ ಶಾಕ್ ಎದುರಾಗಲಿದ್ದು, ಯುಗಾದಿ ಸಂಭ್ರಮದಲ್ಲಿರುವ ಜನರು ಸಂಕಷ್ಟ ಪಡುವಂತಾಗಿದೆ.
ಈಗ ಇದು ಸರ್ಕಾರದ ಯುಗಾದಿ ಗಿಫ್ಟ್ ಎಂದು ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ. ನಾಳೆಯಿಂದ ರಾಜ್ಯದಲ್ಲಿ ಹಾಲು ಹಾಗೂ ವಿದ್ಯುತ್ ದರ ಏರಿಕೆಯಾಗುತ್ತಿದೆ. ಹಾಲಿನ ದರ ಏರಿಕೆ ಮಾಡುವುದಾಗಿ ಈಗಾಗಲೇ ಸರ್ಕಾರ ಘೋಷಿಸಿದೆ.
ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರವನ್ನು 4 ರೂ.ಗೆ ಏರಿಕೆ ಮಾಡಲಾಗಿತ್ತು. ಈ ಪರಿಷ್ಕೃತ ದರ ನಾಳೆಯಿಂದಲೇ ಅಧಿಕೃತವಾಗಿ ಜಾರಿಗೆ ಬರಲಿದೆ. ಹಾಲಿನ ದರದೊಂದಿಗೆ ವಿದ್ಯುತ್ 1ಯೂನಿಟ್‌ಗೆ 36 ಪೈಸೆ ಏರಿಕೆಯಾಗಿದ್ದು, ಅದು ಕೂಡ ನಾಳೆಯಿಂದಲೇ ಜಾರಿಗೆ ಬರಲಿದೆ. ಈಗಾಗಲೇ ರಾಜ್ಯ ಸರ್ಕಾರ ಬಸ್, ಮೆಟ್ರೋ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆ ಮಾಡಿದೆ. ಇದರಿಂದ ಜನ ತತ್ತರಿಸಿ ಹೋಗಿದ್ದಾರೆ. ಇವುಗಳ ಮಧ್ಯೆ ಈಗ ಹಾಲು, ವಿದ್ಯುತ್ ದರ ಏರಿಕೆ ಮಾಡಿದ್ದು, ಬದುಕಿಗೆ ಬರೆ ಕೊಟ್ಟಂತಾಗುತ್ತಿದೆ. ಇದರಿಂದಾಗಿ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.