ಪ್ರಯಾಗರಾಜ್: ಪ್ರಯಾಗ್‌ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 40 ಜನ ಸಾವನ್ನಪ್ಪಿ, 66ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ಮಾಸುವ ಮುನ್ನವೇ ಬೆಂಕಿ ಅವಘಡ ಸಂಭವಿಸಿದೆ.
ಇಂದು ಮಧ್ಯಾಹ್ನ ಬೆಂಕಿ ಅನಾಹುತ ಸಂಭವಿಸಿದೆ. ಆದರೆ, ಯಾವುದೇ ಗಾಯಗಳು ಅಥವಾ ಸಾವುನೋವುಗಳ ಬಗ್ಗೆ ವರದಿಯಾಗಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿ ಅವಘಡ ಸಂಭವಿಸಿದಾಗ ಜನರು ಟೆಂಟ್ ಪ್ರದೇಶದಲ್ಲಿ ಇರಲಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ದುರಂತ ಸಂಭವಿಸಿಲ್ಲ. ಇಂದು ಮಧ್ಯಾಹ್ನ ಮಹಾ ಕುಂಭಮೇಳದಲ್ಲಿ ಮತ್ತೊಮ್ಮೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಇದರಿಂದಾಗಿ ಹಲವಾರು ಪೆಂಡಾಲ್ ಗಳು ಸುಟ್ಟು ಹೋಗಿವೆ. ಛತ್ನಾಗ್ ಘಾಟ್ ನಾಗೇಶ್ವರ ಘಾಟ್ ಸೆಕ್ಟರ್ 22ರ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಮೌನಿ ಅಮವಾಸ್ಯೆಯ ಹಿನ್ನೆಲೆಯಲ್ಲಿ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಸಂಭವಿಸಿತ್ತು. 40ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದರು. ಈ ಹಿಂದೆ ಕೂಡ ಮೇಳದಲ್ಲಿ ಬೆಂಕಿ ಅನಾಹುತ ಸಂಭವಿಸಿತ್ತು. ಆ ವೇಳೆ 180 ಪೆಂಡಾಲ್ಗಳು ಸುಟ್ಟು ಹೋಗಿದ್ದವು. ಜ. 19ರಂದು ಗೀತಾ ಪ್ರೆಸ್ ಶಿಬಿರದಲ್ಲಿದ್ದ 180 ಪೆಂಡಾಲ್ ಗಳು ಬೆಂಕಿಯಲ್ಲಿ ಸುಟ್ಟು ಹೋಗಿದ್ದವು. ಇಂದು ಕೂಡ ಇದೇ ರೀತಿಯ ವಾತಾವರಣ ಸೃಷ್ಟಿಯಾಗಿದೆ.