ರಾಮನಗರ: ಮೈಕ್ರೋ ಫೈನಾನ್ಸ್ (Microfinance) ಹಾವಳಿ ಇತ್ತೀಚೆಗೆ ಮಿತಿ ಮೀರುತ್ತಿದ್ದು, ಈಗ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ.
ಫೈನಾನ್ಸ್ ಕಿರುಕುಳಕ್ಕೆ ಬಲಿ
ರಾಮನಗರ ತಾಲೂಕಿನ ತಿಮ್ಮಯ್ಯನದೊಡ್ಡಿ ಗ್ರಾಮದ ಯಶೋದಮ್ಮ(60) (Yashodamma) ಆತ್ಮಹತ್ಯೆ (sucied) ಮಾಡಿಕೊಂಡಿರುವ ಮಹಿಳೆ. ಯಶೋಧಮ್ಮ ಸುಮಾರು 8ಕ್ಕೂ ಅಧಿಕ ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಮಾಡಿದ್ದರು. ಆದರೆ, ಸಿಬ್ಬಂದಿಯ ಕಿರಿಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಮಹಿಳೆ ಖಾಸಗಿ ಫೈನಾನ್ಸ್ ಕಂಪೆನಿಗಳಲ್ಲಿ 5 ಲಕ್ಷ ಸಾಲ ಪಡೆದಿದ್ದರು. ಆದರೆ, ಇತ್ತೀಚೆಗೆ ಫೈನಾನ್ಸ್ ನ ಸಿಬ್ಬಂದಿ ಮರುಪಾವತಿ ಮಾಡುವಂತೆ ಮನೆಗೆ ಬಂದು ಗಲಾಟೆ ಮಾಡಿದ್ದಾರೆ. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಮಹಿಳೆಯೊಬ್ಬಳು ಸೆಲ್ಫಿ ವಿಡಿಯೋ ಮಾಡಿ ಹೇಮಾವತಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೋರ್ವ ಮಹಿಳೆ ಸಾವನ್ನಪ್ಪಿದ್ದು, ಸರ್ಕಾರ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.