ನವದೆಹಲಿ: ಅಂಬೇಡ್ಕರ್ ವಿರೋಧಿ ಕಾಂಗ್ರೆಸ್ ಸುಳ್ಳುಗಳನ್ನು ಹರಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಆರೋಪಿಸಿದ್ದಾರೆ.
ಅಂಬೇಡ್ಕರ್ ಜಪ ಪಠಿಸುವುದು ಫ್ಯಾಶನ್ ಆಗಿದೆ. 100 ಬಾರಿ ಅಂಬೇಡ್ಕರ್ ಹೆಸರು ಹೇಳುವ ಬದಲು ದೇವರ ನಾಮವನ್ನಾದರೂ ಪಠಿಸಿದ್ದರೆ ಏಳೇಳು ಜನ್ಮದಲ್ಲೂ ಸ್ವರ್ಗಕ್ಕೆ ಹೋಗುತ್ತಿದ್ದಿರಿ ರಾಜ್ಯಸಭೆಯಲ್ಲಿ ಅಮಿತ್ ಶಾ ವ್ಯಂಗ್ಯವಾಡಿದ್ದರು. ಇದಕ್ಕೆ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಮಿತ್ ಶಾ, ಕಾಂಗ್ರೆಸ್ ವಿರುದ್ಧ ಗುಡುಗಿದ್ದಾರೆ.
ಕಾಂಗ್ರೆಸ್ ಸಂವಿಧಾನ ಹಾಗೂ ಅಂಬೇಡ್ಕರ್ ವಿರೋಧಿ. ಅದಕ್ಕೆ ಸುಳ್ಳುಗಳನ್ನು ಹೇಳುವುದು ಬಿಟ್ಟು ಬೇರೆ ಏನೂ ಗೊತ್ತಿಲ್ಲ. ನಾನು ಯಾವತ್ತೂ ಅಂಬೇಡ್ಕರ್ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತುಗಳನ್ನು ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ತಿರುಚಿವೆ ಎಂದು ಗುಡುಗಿದ್ದಾರೆ.