ಬೆಂಗಳೂರು : ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಗಿದೆ.
ಪಕ್ಷ ವಿರೋಧ ಚಟುವಟಿಕೆ ಹಿನ್ನೆಲೆಯಲ್ಲಿ ಅಬ್ದುಲ್ ಜಬ್ಬಾರ್ ಅವರನ್ನು ಅಮಾನತು ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಈ ಸಂಬಂಧಿಸಿದಂತೆ ಆದೇಶ ಹೊರಡಿಸಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ದಾವಣಗೆರೆ ದಕ್ಷಿಣ ಕ್ಷೇತ್ರದ ಚುನಾವಣೆ ವಿಚಾರವಾಗಿ ಅಬ್ದುಲ್ ಜಬ್ಬಾರ್ ವಿರುದ್ದ ಮತ್ತಷ್ಟು ದಾಖಲೆಗಳು ಲಭ್ಯವಾದ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ಆಗಿದೆ. ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಅಬ್ದುಲ್ ಜಬ್ಬಾರ್ ಆಡಿಯೋದಲ್ಲಿ ಕೆಲವೊಂದು ಮಹತ್ವದ ಅಂಶಗಳ ಉಲ್ಲೇಖ ಇದೆ. ಈ ದಾಖಲೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಸಿಕ್ಕಿದೆ. ಶೋಕಾಸ್ ನೋಟಿಸ್ ನೀಡದೆ ಜಬ್ಬಾರ್ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ.
ಇದನ್ನೂ ಓದಿ : RCB ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೆ ಮಯಾಂಕ್ ಯಾದವ್ ಸಜ್ಜು : LSGಗೆ ಆನೆ ಬಲ!



















