ಬೆಂಗಳೂರು: ಸಂತ್ರಸ್ತೆಯ ಅಪಹರಣ (Kidnap) ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavani Revanna) ಗೆ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
ಹೈಕೋರ್ಟ್ (High Court) ಏಕಸದಸ್ಯ ಪೀಠ ಭವಾನಿ ರೇವಣ್ಣ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿದೆ. ಅಲ್ಲದೇ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋದಲ್ಲಿ ನನ್ನ ತಾಯಿಯ ಚಿತ್ರವೂ ಇದ್ದು, ಇದೀಗ ಅವರು ಕಣ್ಮರೆಯಾಗಿದ್ದಾರೆ ಎಂದು ಮೇ 2ರ ತಡರಾತ್ರಿ ಮೈಸೂರಿನ ಕೆಆರ್ ನಗರ ಠಾಣೆಯಲ್ಲಿ ಸಂತ್ರಸ್ತೆ ಪುತ್ರ ದೂರು ನೀಡಿದ್ದರು. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಪತ್ನಿ ಭವಾನಿಯವರ ಸಂಬಂಧಿಯೂ ಆಗಿರುವ ಸತೀಶ್ ಬಾಬು ಎಂಬವರನ್ನು ಈಗಾಗಲೇ ಎಸ್ಐಟಿ ಬಂಧಿಸಿದೆ. ಈ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಮೊದಲ ಆರೋಪಿಯಾಗಿದ್ದಾರೆ. ಈ ಪ್ರಕರಣದಲ್ಲಿ ಭವಾನಿ ಅವರ ಹೆಸರು ಕೂಡ ಇದೆ. ಹೀಗಾಗಿ ಭವಾನಿ ರೇವಣ್ಣ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು.