ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತಿಸಿ, ಅಷ್ಟೇ ಸಂಖ್ಯೆಯ ಹೊಸ ಬಿಪಿಎಲ್ ಕಾರ್ಡ್‌ಗೆ ಮುಂದಿನ ತಿಂಗಳು ಅರ್ಜಿ ಆಹ್ವಾನಿಸುವುದಕ್ಕೆ ಆಹಾರ ಇಲಾಖೆ ನಿರ್ಧರಿಸಿದೆ.
ವರದಿಗಾರರಿಗೆ ಸ್ಪಂದಿಸಿ ಮಾತನಾಡಿದ ಆಹಾರ ಸಚಿವ ಕೆ.ಎಚ್. ಮುನಿಯಪ್ಪ, ‘ಸರ್ಕಾರದ ಮಾನದಂಡಗಳ ಅನ್ವಯ ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಿಸಲಾಗುವುದು. ಅನರ್ಹವೆಂದು ಕಂಡುಬಂದರೆ ಎಪಿಎಲ್‌ಗೆ ವರ್ಗಾವಣೆ ಮಾಡುತ್ತೇವೆ. ಯಾವ ಪಡಿತರ ಚೀಟಿಗಳನ್ನೂ ರದ್ದು ಮಾಡುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
‘ಎಲ್ಲ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತೇವೆ. ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಏನಾದರೂ ಸಣ್ಣಪುಟ್ಟ ಸಮಸ್ಯೆಯಾದರೆ 24 ಗಂಟೆಯೊಳಗೆ ಸರಿಪಡಿಸಿ ಆಹಾರಧಾನ್ಯ ಹಂಚಿಕೆ ಮಾಡಲಾಗುವುದು’ ಎಂದು ತಿಳಿಸಿದ್ದಾರೆ.
‘ದಕ್ಷಿಣ ಭಾರತದ ರಾಜ್ಯಗಳ ಪೈಕಿ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ಗಳು ಅತೀ ಹೆಚ್ಚು ಇವೆ. ಶೇಕಡ 75ರಷ್ಟು ಬಿಪಿಎಲ್ ಕಾರ್ಡ್‌ಗಳು ಕರ್ನಾಟಕದಲ್ಲಿವೆ. ಹೀಗಾಗಿ, ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆ ಅನಿವಾರ್ಯವಾಗಿದೆ’ ಎಂದು ಹೇಳಿದ್ದಾರೆ.