ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆಗೆ ಸಹಿ ಮಾಡಬಾರದು ಎಂದು ಬಿಜೆಪಿ ನಿಯೋಗ ರಾಜ್ಯಪಾಲರಿಗೆ ಮನವಿ ಮಾಡಿದೆ.
ಇಂದು ರಾಜ್ಯಪಾಲರನ್ನು ಭೇಟಿ ಮಾಡಿರುವ ಬಿಜೆಪಿ ನಿಯೋಗ ಮಸೂದೆ ವಿರೋಧಿಸಬೇಕು ಎಂದು ಮನವಿ ಮಾಡಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ನಾಯಕರು ಈ ನಿಯೋಗದಲ್ಲಿದ್ದರು.
ಈ ವೇಳೆ ಮಾತನಾಡಿದ ಆರ್.ಅಶೋಕ್, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಬಿಲ್ ಗೆ ಸಹಿ ಮಾಡದಂತೆ ರಾಜ್ಯಪಾಲರನ್ನು ಮನವಿ ಮಾಡಿದ್ದೇವೆ. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ರಾಜ್ಯಪಾಲರು ಸಹ ನಮ್ಮ ಮನವಿಗೆ ಸ್ಪಂದಿಸಿದ್ದಾರೆ. ಕೀಳು ಬುದ್ಧಿಯ ಕಾಂಗ್ರೆಸ್‌ಗೆ ಪಾಠ ಕಲಿಸುತ್ತೇವೆ ಎಂದಿದ್ದಾರೆ.