ಜೈಲಿನಲ್ಲಿರುವ ನಟ ದರ್ಶನ್‌ಗೆ ಬೆನ್ನುನೋವು ಹಿನ್ನೆಲೆ ವೈದ್ಯಕೀಯ ಸೌಲಭ್ಯ ಕೋರಿ ಅವರ ಪರ ವಕೀಲರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆ ದರ್ಶನ್ ಅರ್ಜಿಗೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಲಿದ್ದಾರೆ.
ಬೆನ್ನುನೋವು ಚಿಕಿತ್ಸೆ ಸಂಬಂಧ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಷನ್ ಸಿದ್ಧತೆ ನಡೆಸಿದ್ದು, ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿ ಕಾಲಾವಕಾಶ ಕೋರಿದ್ದಾರೆ. ಇಂದು ದರ್ಶನ್ ಅವರ ಈ ಅರ್ಜಿ ವಿಚಾರಣೆಯನ್ನು ಕೋರ್ಟ್ ನಡೆಸಲಿದ್ದು, 59ನೇ ಸೆಷನ್ಸ್ ಕೋರ್ಟ್‌ನಲ್ಲಿ ಈ ವಿಚಾರಣೆ ನಡೆಯಲಿದೆ.
ಇದನ್ನೂ ಓದಿ:ನಾಗರಿಕರಿಗೆ ಗುಡ್ ನ್ಯೂಸ್: ಈಗ ಮನೆಯಿಂದಲೇ ಕಳುಹಿಸಿ ಯಾವುದೇ ಪಾರ್ಸೆಲ್

















