ಇಂಡಸ್ಟ್ರಿಯಲ್ ಡೆವಲಪ್‌ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬ್ಯಾಂಕ್ ನಲ್ಲಿ ಒಟ್ಟು 1,000 ಹುದ್ದೆಗಳು ಖಾಲಿಯಿದ್ದು, ಭರ್ತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬ್ಯಾಂಕ್ ನಲ್ಲಿ ಕೆಲಸ ಮಾಡಲು ಇಚ್ಛಿಸುವ ಅಭ್ಯರ್ಥಿಗಳು ನವೆಂಬರ್ 16 ರೊಳಗೆ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್- ಸೇಲ್ಸ್ ಹಾಗೂ ಆಪರೇಷನ್ಸ್, ಖಾಲಿಯಿರುವ ಹುದ್ದೆಗಳು : 1000, ಸಂಬಳ ಮೊದಲ ವರ್ಷ – ತಿಂಗಳಿಗೆ ರೂ 29000, ಎರಡನೇ ವರ್ಷ- ರೂ 31,300 ಆಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷಗಳನ್ನು ನಿಗದಿ ಪಡಿಸಲಾಗಿದೆ. ಅಲ್ಲದೇ, ಸರ್ಕಾರದ ಮಾನದಂಡಗಳ ಪ್ರಕಾರ ಒಬಿಸಿ ವರ್ಗದವರಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ವೇಳೆ ಆಧಾರ್ ಕಾರ್ಡ್, ಎಸ್ಎಸ್ಎಲ್‌ಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರ, ಜಾತಿ ಪ್ರಮಾಣಪತ್ರ, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಭಾವಚಿತ್ರ ಇನ್ನಿತ್ತರ ದಾಖಲೆಗಳನ್ನು ಸಲ್ಲಿಸಬೇಕು.
ಐಡಿಬಿಐ ಎಕ್ಸಿಕ್ಯೂಟಿವ್ ನೇಮಕಾತಿ 2024 ರ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಸಂದರ್ಶನ ಮತ್ತು ದಾಖಲೆ ಪರಿಶೀಲನೆ ಹಾಗೂ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ಪೂರ್ವ ನೇಮಕಾತಿ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತದೆ.
ಸಾಮಾನ್ಯ ಅರ್ಹತೆ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.1050 ಹಾಗೂ ಎಸ್‌ಸಿ / ಎಸ್ಟಿ / ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ರೂ.250. ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಸಲ್ಲಿಸಲು ನ. 7ರಿಂದ ಆರಂಭವಾಗಿ ನ. 16ರ ವರೆಗೆ ಇರಲಿದೆ. ಆನ್ ಲೈನ್ ಪರೀಕ್ಷೆ ಡಿಸೆಂಬರ್ 1ಕ್ಕೆ ಇರಲಿದೆ.