ಬೆಂಗಳೂರು: ಇಂಡಿಯಾ ಇನ್ ಫ್ರಾಸ್ಟ್ರಕ್ಚರ್ ಫೈನಾನ್ಸ್ ಕಂಪನಿ ಲಿಮಿಟೆಡ್ ನಲ್ಲಿ (IIFCL) ಎಂಟು ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನಾಲ್ಕು ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹಾಗೂ ನಾಲ್ಕು ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮೇ 14 ಕೊನೆಯ ದಿನವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 55,200 ರೂ. ಸಂಬಳ ನೀಡಲಾಗುತ್ತದೆ. ಇನ್ನು, ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದವರಿಗೆ ಮಾಸಿಕ 44,500 ರೂಪಾಯಿ ಸಂಬಳ ನೀಡಲಾಗುತ್ತದೆ. ಸ್ನಾತಕೋತ್ತರ ಪದವಿ, ಎಲ್ ಎಲ್ ಬಿ, ಸಿ ಎಸ್, ಬಿ.ಟೆಕ್ ಅಥವಾ ಬಿ.ಇ ಕೋರ್ಸ್ ಮುಗಿಸಿರಬೇಕು ಎಂದು ಸೂಚಿಸಲಾಗಿದೆ.
ಗ್ರೇಡ್ ಬಿ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರಿಗೆ 7 ವರ್ಷದ ಕಾರ್ಯಾನುಭವ ಇರಬೇಕು. ಇನ್ನು, ಗ್ರೇಡ್ ಎ ಅಸಿಸ್ಟಂಟ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರಿಗೆ ಕನಿಷ್ಠ 2 ವರ್ಷ ಕಾರ್ಯಾನುಭವ ಇರಬೇಕು ಎಂದು ತಿಳಿಸಲಾಗಿದೆ. ಜನರಲ್ ಹಾಗೂ ಒಬಿಸಿಯವರಿಗೆ 600 ರೂ. ಹಾಗೂ ಎಸ್ಸಿ, ಎಸ್ಟಿಯವರಿಗೆ 100 ರೂ. ಅರ್ಜಿ ಶುಲ್ಕವಿದೆ.
ಅರ್ಜಿ ಸಲ್ಲಿಕೆ ಹೇಗೆ?
• ಅಧಿಕೃತ ವೆಬ್ಸೈಟ್ https://iifcl.in/ ಗೆ ಭೇಟಿ ನೀಡಬೇಕು
• ಮ್ಯಾನೇಜರ್, ವೈಯಕ್ತಿಕ ಸಲಹೆಗಾರ ಹುದ್ದೆಗಳ ಅಧಿಸೂಚನೆಯನ್ನು ತೆರೆಯಿರಿ ಮತ್ತು ಅರ್ಹತೆಯನ್ನು ಪರಿಶೀಲಿಸಿ.
• ಅರ್ಜಿ ನಮೂನೆಯನ್ನು ಪ್ರಾರಂಭಿಸುವ ಮೊದಲು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ.
• ನೀವು ಅರ್ಹರಾಗಿದ್ದರೆ, ಯಾವುದೇ ತಪ್ಪುಗಳಿಲ್ಲದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆನ್ ಲೈನ್ ಮೂಲಕ ಸಲ್ಲಿಸಬೇಕು.



















