ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಸಿಐಎಸ್ಎಫ್ನಲ್ಲಿ ಖಾಲಿ ಇರುವ ಕಾನ್ ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸಿಐಎಸ್ ಎಫ್ ನಲ್ಲಿ ಒಟ್ಟು 1161 ಕಾನ್ ಸ್ಟೆಬಲ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು CISF ನ ಅಧಿಕೃತ ವೆಬ್ಸೈಟ್ cisfrectt.cisf.gov.in ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 3 (ರಾತ್ರಿ 11:59 ರ ವರೆಗೆ ಇದೆ).
ಅರ್ಜಿ ಸಲ್ಲಿಸಲು ಅರ್ಹತೆ ಏನು?
ಶೈಕ್ಷಣಿಕ ಅರ್ಹತೆ: ಕೌಶಲ್ಯ ವಹಿವಾಟುಗಳಿಗೆ (ಕ್ಷೌರಿಕ, ಬೂಟ್ ತಯಾರಕ / ಚಮ್ಮಾರ, ದರ್ಜಿ, ಅಡುಗೆ, ಬಡಗಿ, ತೋಟಗಾರ, ಪೇಂಟರ್, ಚಾರ್ಜ್ ಮೆಕ್ಯಾನಿಕ್, ವಾಷರ್ ಮ್ಯಾನ್, ವೆಲ್ಡರ್, ಎಲೆಕ್ಟ್ರಿಷಿಯನ್ ಮತ್ತು ಮೋಟಾರ್ ಪಂಪ್ ಅಟೆಂಡೆಂಟ್) ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ಅದಕ್ಕೆ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿಂದ ಮೆಟ್ರಿಕ್ಯುಲೇಷನ್ ಅಥವಾ ತತ್ಸಮಾನ ಅರ್ಹತೆಯನ್ನು ಹೊಂದಿರಬೇಕು.
ವಯಸ್ಸಿನ ಮಿತಿ: ಆಗಸ್ಟ್ 1, 2025 ಕ್ಕೆ 18 ರಿಂದ 23 ವರ್ಷಗಳ ನಡುವೆ ಇರಬೇಕು. ಆಗಸ್ಟ್ 1, 2007 ರ ನಂತರ ಜನಿಸಿರಬಾರದು.
ಅರ್ಜಿ ಶುಲ್ಕ : ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ. ಮಹಿಳಾ ಅಭ್ಯರ್ಥಿಗಳು ಮತ್ತು ಎಸ್ಸಿ, ಎಸ್ಟಿ ಮತ್ತು ಮಾಜಿ ಸೈನಿಕರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
-CISF ನ ಅಧಿಕೃತ ವೆಬ್ಸೈಟ್ cisfrectt.cisf.gov.in ಗೆ ಹೋಗಬೇಕು.
- ನೇಮಕಾತಿ 2025 ಲಿಂಕ್ ಅನ್ನು ಕ್ಲಿಕ್ ಮಾಡಿ.
- ನಂತರ ನೋಂದಣಿ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸಬೇಕು.