ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿಯೇ ಅಗ್ರ ಬ್ಯಾಂಕ್ ಎನಿಸಿರುವ ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ (SBI Recruitment 2026) ಖಾಲಿ ಇರುವ 8 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 8 ಬಿಸಿನೆಸ್ ಅನಾಲಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವವರು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎನ್ನುವವರಿಗೆ ಸಿಹಿ ಸುದ್ದಿ ದೊರೆತಂತಾಗಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ಸ್ಟೇಟ್ ಬ್ಯಾಂಕ್
ಒಟ್ಟು ಹುದ್ದೆಗಳು: 8
ಹುದ್ದೆಗಳ ಹೆಸರು: ಲೀಡ್ ಬಿಸಿನೆಸ್ ಅನಾಲಿಸ್ಟ್
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 4
ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಬಿ.ಇ. ಬಿ.ಟೆಕ್, ಎಂಬಿಎ, ಎಂಸಿಎ, ಎಂಎಸ್ಸಿ ಕೋರ್ಸ್ ಮುಗಿಸಿರಬೇಕು. ಮುಂಬೈ ಸೇರಿ ಕರ್ನಾಟಕದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಸಲ್ಲಿಕೆಯಾದ ಅರ್ಜಿಗಳನ್ನು ಮೊದಲು ಪರಿಶೀಲನೆ ಮಾಡಲಾಗುತ್ತದೆ. ಇದಾದ ಬಳಿಕ ಸಂದರ್ಶನಕ್ಕೆ ಆಹ್ವಾನಿಸಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿ ಹೊಂದಿದವರಿಗೆ ಅವರ ಕಾರ್ಯಾನುಭವದ ಆಧಾರದ ಮೇಲೆ ವರ್ಷಕ್ಕೆ 45 ಲಕ್ಷ ರೂಪಾಯಿವರೆಗೆ ಪ್ಯಾಕೇಜ್ ನೀಡಲಾಗುತ್ತದೆ. ಜನರಲ್, ಒಬಿಸಿ, ಇಡಬ್ಲ್ಯೂಎಸ್ ನವರಿಗೆ 750 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿಯವರಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ. ಗುತ್ತಿಗೆ ಆಧಾರದ ಮೇಲೆ ಐದು ವರ್ಷಗಳ ಅವಧಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವವರು https://sbi.bank.in/web/careers/current-openings ವೆಬ್ ಸೈಟ್ ಗೆ ಭೇಟಿ ನೀಡಬಹುದು.
ಇದನ್ನೂ ಓದಿ : ಬಿಗ್‌ಬಾಸ್ ರಜತ್ ಮತ್ತೊಂದು ಎಡವಟ್ಟು : ಪೆಟ್ರೋಲ್ ಬಾಂಬ್ ಮಾದರಿ ಸ್ಫೋಟಿಸಿ ರೀಲ್ಸ್!



















