ರಾಯಚೂರು: ಜಿಲ್ಲೆಯ ಮಸ್ಕಿ ತಾಲೂಕಿನಲ್ಲಿ ಕೇಂದ್ರ ಸರ್ಕಾರದ ನೀತಿ ಆಯೋಗದ ತಾಲೂಕು ಕಾರ್ಯಕ್ರಮದಡಿಯಲ್ಲಿ ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಯ (Aspirational Block Fellow) ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್ ಲೈನ್ ಮೂಲಕ https://raichur.nic.in ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಮೇ 2 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 55 ಸಾವಿರ ರೂ.ವರೆಗೆ ವೇತನ ನೀಡಲಾಗುತ್ತದೆ. ಸಂಶೋಧನೆ, ಅಭಿವೃದ್ಧಿ, ಅನುಷ್ಠಾನ, ಸಾರ್ವಜನಿಕ ನೀತಿ, ಸಾರ್ವಜನಿಕ ಆಡಳಿತ ಅಥವಾ ಸಂಬಂಧಿತ ಕ್ಷೇತ್ರಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಎಂಎಸ್ಸಿ, ಎಂಸಿಎ ಹಾಗೂ ಎಂ.ಟೆಕ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದವರಿಗೂ ಆದ್ಯತೆ ನೀಡಲಾಗುತ್ತದೆ.
ಕೌಶಲ ಉಳ್ಳವರಿಗೆ ಆದ್ಯತೆ
ಡೇಟಾ ವಿಶ್ಲೇಷಣೆ ಹಾಗೂ ಅವುಗಳ ಪ್ರೆಸೆಂಟೇಷನ್ ಗೊತ್ತಿರುವುದು ಸೇರಿ ಹಲವು ಕೌಶಲಗಳು ಇದ್ದವರಿಗೆ ಆ್ಯದ್ಯತೆ ನೀಡಲಾಗುತ್ತದೆ. ಇದರ ಜತೆಗೆ ಕಂಪ್ಯೂಟರ್ ಹಾಗೂ ಸೋಷಿಯಲ್ ಮೀಡಿಯಾ ಬಳಕೆ ಗೊತ್ತಿರಬೇಕು. ಪ್ರಾಜೆಕ್ಟ್ ಮ್ಯಾನೇಜ್ ಮೆಂಟ್ ಕೌಶಲಗಳು ಕೂಡ ಇರಬೇಕು. ಸಾಮಾಜಿಕ ಅಭಿವೃದ್ಧಿ ಸಂಸ್ಥೆಗಳಲ್ಲಿ ಕನಿಷ್ಠ 01 ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಇಂಗ್ಲಿಷ್ ಮತ್ತು ಕನ್ನಡ ಭಾಷೆಗಳಲ್ಲಿ ಉತ್ತಮ ಸಂವಹನ ಮತ್ತು ಬರವಣಿಗೆ ಕೌಶಲವನ್ನು ಇರಬೇಕು ಎಂದು ತಿಳಿಸಲಾಗಿದೆ.
ಅಭ್ಯರ್ಥಿಗಳಿಂದ ಅರ್ಜಿ ಸ್ವೀಕರಿಸಿದ ಬಳಿಕ ಮೆರಿಟ್ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ನಂತರ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 08532 -229011 ಸಂಖ್ಯೆಗೆ ಕರೆ ಮಾಡಬಹುದಾಗಿದೆ. ಒಂದು ಹುದ್ದೆ ಮಾತ್ರ ಖಾಲಿ ಇದ್ದು, 11 ತಿಂಗಳ ಅವಧಿಗಾಗಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.