ಬೆಂಗಳೂರು: ವಿದ್ಯಾಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 9 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅಸಿಸ್ಟೆಂಟ್ ಎಂಜಿನಿಯರ್ ಮತ್ತು ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಜುಲೈ 18ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿರುತ್ತದೆ. ಸಂದರ್ಶನವು ಅಸೋಸಿಯೇಟ್ ರಿಸರ್ಚ್ ಡೈರೆಕ್ಟರ್ ಕಚೇರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಧಾರವಾಡದಲ್ಲಿ ನಡೆಯಲಿದೆ.
ಯಾವ ಹುದ್ದೆ ಎಷ್ಟು ಖಾಲಿ?
ಅಸಿಸ್ಟಂಟ್ ಎಂಜಿನಿಯರ್ (Civil) : 2
ಅಸಿಸ್ಟಂಟ್ ಎಂಜಿನಿಯರ್ (Electrical) : 1
ಜೂನಿಯರ್ ಎಂಜಿನಿಯರ್ (Civil) : 4
ಜೂನಿಯರ್ ಎಂಜಿನಿಯರ್ (Electrical) : 2
ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ, ಸಿವಿಲ್ ಎಂಜಿನಿಯರಿಂಗ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ಪಡೆದವರು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಅಸಿಸ್ಟಂಟ್ ಎಂಜಿನಿಯರ್ ಹುದ್ದೆಗಳಿಗೆ 30,255 ರೂಪಾಯಿ ಹಾಗೂ ಜೂನಿಯರ್ ಎಂಜಿನಿಯರ್ ಹುದ್ದೆಗಳಿಗೆ 24,590 ರೂಪಾಯಿ ಸಂಬಳ ಇರುತ್ತದೆ.


















