ಎಂಜಲಿನಿಂದ ಮುಖಕ್ಕೆ ಮಸಾಜ್ ಮಾಡಿದ್ದ ಕ್ಷೌರಿಕನ ಸಲೂನ್ ಅಂಗಡಿಯನ್ನು ಧ್ವಂಸ ಮಾಡಿರುವ ಘಟನೆ ನಡೆದಿದೆ.
ಉತ್ತರ ಪ್ರದೇಶದ ಕನೌಜ್ ಜಿಲ್ಲಾಡಳಿತ ಈ ಕಠಿಣ ನಿರ್ಧಾರ ಕೈಗೊಂಡಿದೆ. ಉತ್ತರ ಪ್ರದೇಶದ ಕನೌಜ್ ನ ಸಲೂನ್ ವೊಂದರಲ್ಲಿ ಕ್ಷೌರಿಕ ಯೂಸುಫ್ ತನ್ನ ಎಂಜಲು ಬಳಸಿ ಗ್ರಾಹಕರೊಬ್ಬರ ಮುಖಕ್ಕೆ ಮಸಾಜ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದನ್ನು ಆತನೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದ ಎಂದು ತಿಳಿದು ಬಂದಿದೆ.
ಆದರೆ, ಆನಂತರ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಆತ ಪರಾರಿಯಾಗಿದ್ದ. ಈಗ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಆತ ಸಲೂನ್ ನ್ನು ನಿರ್ಮಿಸಿದ್ದ ಎಂದು ತಿಳಿದು ಬಂದಿದೆ. ಹೀಗಾಗಿ ಆತನ ಸಲೂನ್ ನ್ನು ಧ್ವಂಸ ಮಾಡಲಾಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಯೂಸುಫ್ ವಿರುದ್ಧ ಪ್ರತಿಭಟನೆ ನಡೆಸಿ ಆತನ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಈ ವಿಡಿಯೋವನ್ನು 15 ದಿನಗಳ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಲಾಗಿತ್ತು ಎಂದು ತಿಳಿದು ಬಂದಿದೆ. ಈ ವಿಡಿಯೋ ಕಂಡು ಜನರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.