ನವದೆಹಲಿ: 5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.
ಬಿಹಾರ, ಒಡಿಶಾ, ಮಿಜೋರಾಂ, ಕೇರಳ ಮತ್ತು ಮಣಿಪುರ ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ ಮಾಡಲಾಗಿದೆ. ಇಬ್ಬರು ಹೊಸ ರಾಜ್ಯಪಾಲರನ್ನು ನೇಮಕ ಮಾಡಲಾಗಿದ್ದು, ಮೂವರು ರಾಜ್ಯಪಾಲರ ರಾಜ್ಯಗಳನ್ನು ಬದಲಾವಣೆ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.
ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಮಣಿಪುರದ ನೂತನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. ಒಡಿಶಾದ ನೂತನ ರಾಜ್ಯಪಾಲರನ್ನಾಗಿ ಡಾ. ಹರಿಬಾಬು ಕಂಭಂಪತಿ ನೇಮಕಗೊಂಡಿದ್ದಾರೆ.
ಮಿಜೋರಾಂ ಗವರ್ನರ್ ವಿಜಯ್ ಕುಮಾರ್ ಸಿಂಗ್ ನೇಮಕಗೊಂಡಿದ್ದಾರೆ. ಕೇರಳ ರಾಜ್ಯಪಾಲರಾಗಿ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ನೇಮಕವಾಗಿದ್ದಾರೆ. ಬಿಹಾರ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಬದಲಾಗಿ ನೂತನ ರಾಜ್ಯಪಾಲರಾಗಿ ಮೊಹಮ್ಮದ್ ಆರೀಫ್ ಖಾನ್ ನೇಮಕಗೊಂಡಿದ್ದಾರೆ.
ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ವರ್ಗಾವಣೆ ಮಾಡಲಾಗಿದ್ದು, ಬಿಹಾರದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇಂದ್ರದ ಮಾಜಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಮಾಜಿ ಸೇನಾ ಮುಖ್ಯಸ್ಥ ವಿಜಯ್ ಕುಮಾರ್ ಸಿಂಗ್ ಅವರು ಮಿಜೋರಾಂ ರಾಜ್ಯಪಾಲರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಒಡಿಶಾ ರಾಜ್ಯಪಾಲ ರಘುಬರ್ ದಾಸ್ ಅವರ ರಾಜೀನಾಮೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಗೀಕರಿಸಿದ್ದಾರೆ. ರಘುಬರ್ ದಾಸ್ ಬದಲಿಗೆ ಮಿಜೋರಾಂ ರಾಜ್ಯಪಾಲ ಹರಿಬಾಬು ಕಂಬಂಪತಿ ಅವರನ್ನು ಒಡಿಶಾದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.