ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನಕ್ಕೆ (Vishwa Okkaliga Mahasamsthan) ನೂತನ ಉತ್ತರಾಧಿಕಾರಿಯಾಗಿ ಹಿರಿಯ ಕೆಎಎಸ್ ಅಧಿಕಾರಿ ನೇಮಕವಾಗಿದ್ದಾರೆ.
ಹಿರಿಯ ಕೆಎಎಸ್ ಅಧಿಕಾರಿ ಡಾ. ಎಚ್.ಎಲ್. ನಾಗರಾಜ್ ನೂತನ ಉತ್ತರಾಧಿಕಾರಿಯಾಗಿ ನೇಮಕವಾಗಿದ್ದಾರೆ. ಸದ್ಯ ಇರುವ ಪೀಠಾಧಿಪತಿ ಚಂದ್ರಶೇಖರ ಸ್ವಾಮೀಜಿ ಅವರ ವಯಸ್ಸು 81 ಆಗಿರುವುದರಿಂದಾಗಿ ಟ್ರಸ್ಟಿಗಳು ಹಾಗೂ ಸ್ವಾಮೀಜಿಗಳ ತೀರ್ಮಾನದಂದೆ ಪಟ್ಟಾಭಿಷೇಕಕ್ಕೆ ನಿರ್ಧರಿಸಲಾಗಿದೆ. ಕೆಂಗೇರಿ ಹತ್ತಿರವಿರುವ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದಲ್ಲಿ ಡಿ. 14, 15ರಂದು ಪಟ್ಟಾಭಿಷೇಕ ಕಾರ್ಯಕ್ರಮ ನಡೆಯಲಿದೆ.
ಅಂದು ಗಂಗೆಪೂಜೆ, ಶಿವಪಾರ್ವತಿಯರ ಪೂಜೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ನಾಂದಿ ಸಮಾರಾಧನೆ, ರಕ್ಷಾ ಬಂಧನ, ಪೋಷಕರಿಂದ ರಕ್ತ ಸಂಬಂಧದ ತ್ಯಾಗ ಮತ್ತು ಸಮಾಜಕ್ಕೆ ಉತ್ತರಾಧಿಕಾರಿಯ ಸಮರ್ಪಣೆ ಇತ್ಯಾದಿ ಕಾರ್ಯಗಳು ನಡೆಯಲಿವೆ ಎನ್ನಲಾಗಿದೆ.