ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ.
ಈ ಸಂಬಂಧ ಸಿಸಿಬಿ ಸೈಬರ್ ಕ್ರೈಂ ಪೊಲೀಸರು 45ನೇ ಎಸಿಎಂಎಂ ನ್ಯಾಯಾಲಯಕ್ಕೆ ಆರು ಆರೋಪಿಗಳ ವಿರುದ್ಧ ಸುಮಾರು 473 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದ್ದಾರೆ. ಪ್ರಕರಣದ ತನಿಖೆ ವೇಳೆ ಆರೋಪಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.
ಚಾರ್ಜ್‌ಶೀಟ್‌ನಲ್ಲಿ ಕೆಲ ಆರೋಪಿಗಳು ನಟ ಸುದೀಪ್ ಅವರ ಅಭಿಮಾನಿಗಳಾಗಿದ್ದಾರೆ ಎಂಬ ಸಂಗತಿ ಬಹಿರಂಗವಾಗಿದೆ. ಆರೋಪಿಗಳು ನಕಲಿ ಐಡಿಗಳನ್ನು ಸೃಷ್ಟಿಸಿ ವಿಜಯಲಕ್ಷ್ಮಿ ಅವರನ್ನು ಟಾರ್ಗೆಟ್ ಮಾಡಿ ಅಶ್ಲೀಲ ಫೋಟೋಗಳು ಹಾಗೂ ಕಾಮೆಂಟ್‌ಗಳನ್ನು ಪೋಸ್ಟ್ ಮಾಡಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ.
ಇದೀಗ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳ ಮೊಬೈಲ್‌ಗಳನ್ನು ವಶಪಡಿಸಿಕೊಂಡು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದ್ದು, ಡೇಟಾ ರಿಟ್ರೀವ್ ಮಾಡಿ ವರದಿ ಬರಲು ಪೊಲೀಸರು ಕಾಯುತ್ತಿದ್ದಾರೆ.
ಇದಲ್ಲದೆ ಅಶ್ಲೀಲ ಕಾಮೆಂಟ್ ಮಾಡಿದ್ದ ಇನ್ನೂ 12 ಐಡಿಗಳ ಬಗ್ಗೆ ಮಾಹಿತಿ ಸಿಕ್ಕಿಲ್ಲ. ಈ ಸಂಬಂಧ ಸಂಬಂಧಿತ ಕಂಪನಿಗಳಿಗೆ ಪೊಲೀಸರು ಪತ್ರ ಬರೆದಿದ್ದು, ಉತ್ತರಕ್ಕಾಗಿ ಕಾಯುತ್ತಿದ್ದಾರೆ. ಸದ್ಯ ಪ್ರಾಥಮಿಕ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಹೆಚ್ಚುವರಿ ಚಾರ್ಜ್‌ಶೀಟ್ ಸಲ್ಲಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇತ್ತ ಚಾರ್ಜ್‌ಶೀಟ್ ಸಲ್ಲಿಕೆಯಾದ ಬಳಿಕ ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಮಾರ್ಚ್ 24ಕ್ಕೆ ಮುಂದೂಡಿದೆ. ಅಶ್ಲೀಲ ಕಾಮೆಂಟ್ ಪ್ರಕರಣದಲ್ಲಿ ಬಂಧಿತ ಆರು ಆರೋಪಿಗಳು ಕಳೆದ 66 ದಿನಗಳಿಂದ ಜೈಲಿನಲ್ಲಿದ್ದಾರೆ.
ಇದನ್ನೂ ಓದಿ : ಚಿತ್ರದುರ್ಗದಲ್ಲಿ ಬೃಹತ್ ಗಾತ್ರದ ಚಿರತೆ ಪ್ರತ್ಯಕ್ಷ | ಬೆಚ್ಚಿಬಿದ್ದ ಸ್ಥಳೀಯರು


















