ಬೆಂಗಳೂರು: ಇಸ್ರೋದಲ್ಲಿ ಕಾರ್ಯ ನಿರ್ವಹಿಸುವುದಕ್ಕೆ ನೀವು ಇಷ್ಟಪಡುತ್ತಿದ್ದರೆ, ಅಂತವರಿಗೆ ಇದೊಂದು ಸುವರ್ಣಾವಕಾಶ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ.
ಇಸ್ರೋ ತನ್ನ 2025ರ ಉದ್ಯೋಗ ಅಧಿಸೂಚನೆಯನ್ನು ತನ್ನ ಅಧಿಕೃತ ವೆಬ್‌ಸೈಟ್ isro.gov.in ಮೂಲಕ ಬಿಡುಗಡೆ ಮಾಡಿದೆ.
ಖಾಲಿ ಹುದ್ದೆಯ ವಿವರ:
ಇಸ್ರೋ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ತಾಂತ್ರಿಕ ಸಹಾಯಕ ಹುದ್ದೆಗಳು 12, ಉಪ ಅಧಿಕಾರಿ ಹುದ್ದೆಗಳು 1, ತಂತ್ರಜ್ಞ-ಬಿ ಹುದ್ದೆಗಳು 6, ಹೆವಿ ವೆಹಿಕಲ್ ಡ್ರೈವರ್-ಎ ಹುದ್ದೆಗಳು 2 ಮತ್ತು ಲಘು ವಾಹನ ಚಾಲಕ-ಎ ಹುದ್ದೆಗಳು ಖಾಲಿ ಇವೆ.
ವಯೋಮಿತಿ:
ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ವಯಸ್ಸು ಮೀರಬಾರದು. (ವಯೋಮಿತಿ ಸಡಿಲಿಕೆ: SC/ST ಅಭ್ಯರ್ಥಿಗಳು: 05 ವರ್ಷಗಳು, ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು)
ಸಂಬಳ: 7ನೇ ಹಣಕಾಸು ಆಯೋಗದ ಅನುಗುಣವಾಗಿ 44,900 ರಿಂದ 1,42,400
ಅರ್ಜಿ ಶುಲ್ಕ:
- ಮಹಿಳಾ/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಬಿಡಿ/ಮಾಜಿ ಸೈನಿಕರ ಅಭ್ಯರ್ಥಿಗಳು: ಇಲ್ಲ
- ಇತರ ಎಲ್ಲಾ ಅಭ್ಯರ್ಥಿಗಳು: ರೂ.750/-
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ 10 ನೇ, ಐಟಿಐ,ಡಿಪ್ಲೊಮಾ, ಬಿ ಎಸ್ಸಿ ಪೂರ್ಣ ಗೊಳಿಸಿರಬೇಕು.
ಸಾಮಾನ್ಯ ಷರತ್ತುಗಳು:
ಅಭ್ಯರ್ಥಿಗಳು ಭಾರತೀಯ ನಾಗರಿಕರಾಗಿರಬೇಕು ಮತ್ತು ISROನ ಮಾನದಂಡಗಳಿಗೆ ಅನುಗುಣವಾಗಿರಬೇಕು. ತಪ್ಪು ಮಾಹಿತಿ ನೀಡಿದರೆ ಅರ್ಜಿಯನ್ನು ತಿರಸ್ಕರಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ISROನ ನಿಯಮಾವಳಿಗಳನ್ನು ಪಾಲಿಸಬೇಕು.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 12-08-2025
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-08-2025
ಅರ್ಜಿ ಸಲ್ಲಿಸುವುದು ಹೇಗೆ?
1. ಕೆಳಗಿನ ಲಿಂಕ್/ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಸೂಚನೆಯನ್ನು ಡೌನ್‌ಲೋಡ್ ಮಾಡಿ.
2. ಅಧಿಕೃತ ಸೂಚನೆಯನ್ನು ಎಚ್ಚರಿಕೆಯಿಂದ ಓದಿ.
3. ಕೆಳಗಿನ ಆನ್‌ಲೈನ್/ಆಫ್‌ಲೈನ್ ಅಪ್ಲಿಕೇಶನ್‌ಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
4. ಕೊಟ್ಟಿರುವ ಫಾರ್ಮ್ ಅನ್ನು ಸರಿಯಾಗಿ ಭರ್ತಿ ಮಾಡಿ.
5. ಅರ್ಜಿ ಶುಲ್ಕದ ಪಾವತಿ (ವಿನಂತಿಸಿದರೆ ಮಾತ್ರ)
6. ಸೂಕ್ತವಾದ ಫೋಟೋ ಮತ್ತು ಸಹಿಯನ್ನು ಲಗತ್ತಿಸಿ.
7. ಮತ್ತೊಮ್ಮೆ ಪರಿಶೀಲಿಸಿ ಮತ್ತು ಫಾರ್ಮ್ ಅನ್ನು ಸಲ್ಲಿಸಿ.
8. ಅಂತಿಮವಾಗಿ, ಅದನ್ನು ಮುದ್ರಿಸಲು ಮರೆಯಬೇಡಿ
ಅಧಿಕೃತ ಲಿಂಕ್ :
https://www.isro.gov.in/media_isro/pdf/recruitmentNotice/2025_August/AdvertisementLPSC012025.pdf
https://www.isro.gov.in/LPSCRecruitment12.html



















