ಬೆಂಗಳೂರು: ಕರ್ನಾಟಕದ ಬೆಂಗಳೂರಿನಲ್ಲಿರುವ, ಸರ್ಕಾರಿ ಸ್ವಾಮ್ಯದ ಆರ್ಯಭಟ ರಿಸರ್ಚ್ ಇನ್ ಸ್ಟಿಟ್ಯೂಟ್ ಆಫ್ ಅಬ್ಸರ್ವೇಷನಲ್ ಸೈನ್ಸಸ್ (ARIES Recruitment 2025) ಸಂಸ್ಥೆಯಲ್ಲಿ ಖಾಲಿ ಇರುವ 3 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಮೂರು ರಿಸರ್ಚ್ ಅಸೋಸಿಯೇಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇಲ್ಲಿದೆ.
ಹುದ್ದೆಗಳ ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಆರ್ಯಭಟ ರಿಸರ್ಚ್ ಇನ್ ಸ್ಟಿಟ್ಯೂಟ್ ಆಫ್ ಅಬ್ಸರ್ವೇಷನಲ್ ಸೈನ್ಸಸ್ (ARIES)
ಹುದ್ದೆ ಹೆಸರು: ರಿಸರ್ಚ್ ಅಸೋಸಿಯೇಟ್
ಒಟ್ಟು ಹುದ್ದೆಗಳು: 03
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನ: ಡಿಸೆಂಬರ್ 11
ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಬಿಇ ಅಥವಾ ಬಿ.ಟೆಕ್ ಕೊರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 31 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತದೆ. ಗರಿಷ್ಠ 35 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಅರ್ಜಿ ಸಲ್ಲಿಸುವುದು ಹೇಗೆ?
- ಮೊದಲಿಗೆ ಅಧಿಕೃತ ವೆಬ್ ಸೈಟ್ ಆಗಿರುವ aries.res.in ಗೆ ಭೇಟಿ ನೀಡಬೇಕು
- ನಿಮಗೆ ಬೇಕಾದ ಹುದ್ದೆಯ ಅಧಿಸೂಚನೆಯನ್ನು ಓದಬೇಕು
- ಆನ್ ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಬೇಕು.
- ಅರ್ಜಿಯನ್ನು ಯಾವುದೇ ತಪ್ಪುಗಳಿಲ್ಲದ ರೀತಿ ಭರ್ತಿ ಮಾಡಬೇಕು
_ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳ ಸಾಫ್ಟ್ ಕಾಪಿಗಳನ್ನು kumar@aries.res.in, tskumar@gmail.com ಗೆ ಇ-ಮೇಲ್ ಮಾಡಬೇಕು.
ಇದನ್ನೂ ಓದಿ: ಟ್ವಿನ್-ಟರ್ಬೊ V8 ಹೈಬ್ರಿಡ್ ದೈತ್ಯ : ಟೊಯೋಟಾದಿಂದ GR GT ಮತ್ತು GR GT3 ಸೂಪರ್ ಕಾರುಗಳು ಅನಾವರಣ



















