ನವದೆಹಲಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಸಿಬಿಐ ವಶಕ್ಕೆ ಪಡೆದಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ (Delhi Excise Policy Scam) ಇಡಿಯಿಂದ ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದ ಅರವಿಂದ್ ಕೇಜ್ರಿವಾಲ್ (Arvind Kejriwal) ರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅರೆಸ್ಟ್ ಮಾಡಿದೆ. ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿಯ ವಿಚಾರಣೆ ಬುಧವಾರಕ್ಕೆ ನಿಗದಿಯಾಗಿತ್ತು. ಆದರೆ, ಅದಕ್ಕೂ ಒಂದು ದಿನದ ಮೊದಲೇ ಸಿಬಿಐ ಬಂಧಿಸುವ ಮೂಲಕ ಕೇಜ್ರಿವಾಲ್ ಗೆ ಮತ್ತೊಂದು ಶಾಕ್ ನೀಡಿದೆ.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇಂದು ಸಂಜೆ ತಿಹಾರ್ ಜೈಲಿನಿಂದ ಬಂಧಿಸಿದೆ. ಕೇಂದ್ರೀಯ ತನಿಖಾ ದಳ ಸೋಮವಾರ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ಪರೀಕ್ಷಿಸಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಹೇಳಿಕೆ ದಾಖಲಿಸಿದೆ. ಬುಧವಾರ ಸಂಬಂಧಪಟ್ಟ ವಿಚಾರಣೆ ಇರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.
ದೆಹಲಿ ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಮಾರ್ಚ್ 21ರಂದು ಇಡಿ (ಜಾರಿ ನಿರ್ದೇಶನಾಲಯ) ಬಂಧಿಸಿತ್ತು.