ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಸಾವಿರಾರು ಆಶಾ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿನೂತನವಾಗಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಕೊಟ್ಟ ಭರವಸೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿರುವ ಆಶಾ ಕಾರ್ಯಕರ್ತೆಯರು, ತಮ್ಮ ಹೋರಾಟಕ್ಕೆ ಹೊಸ ರೂಪ ನೀಡಿದ್ದಾರೆ. ಫ್ರೀಡಂ ಪಾರ್ಕ್ ಸುತ್ತಮುತ್ತ ಮಾನವ ಸರಪಳಿ ನಿರ್ಮಿಸುವ ಮೂಲಕ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ.


















