ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಗೆ ಹೆಚ್ಚಿಸುವಂತೆ ಪಟ್ಟು ಹಿಡಿದಿರುವ ಮಹಿಳೆಯರು, ಕೊರೆಯುವ ಚಳಿಯನ್ನೂ ಲೆಕ್ಕಿಸದೆ ರಸ್ತೆಯಲ್ಲೇ ಮಲಗಿ ಪ್ರತಿಭಟನೆ ಮುಂದುವರೆಸಿದ್ದಾರೆ.
ಈ ನಡುವೆ ಆರೋಗ್ಯ ಇಲಾಖೆ ನಿರ್ದೇಶಕರ ಜೊತೆ ನಡೆದ ಸಭೆಯಲ್ಲಿ, ಗೌರವಧನ ಹೆಚ್ಚಳದ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟ ಸಭೆಗೆ ನೀಡುವ ಭರವಸೆ ನೀಡಲಾಗಿದೆ. ಆದರೆ, ಈ ಪ್ರಸ್ತಾವನೆ ಸಚಿವ ಸಂಪುಟದಲ್ಲಿ ಅಂಗೀಕಾರವಾಗುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಕಾರ್ಯಕರ್ತೆಯರು ಸ್ಪಷ್ಟಪಡಿಸಿದ್ದಾರೆ.


















