ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಅಶ್ವಿನಿ ಪುನೀತ್ ರಾಜಕುಮಾರ್ ಭೇಟಿ ನೀಡಿದ್ದಾರೆ. ಈ ವೇಳೆ ಡಾ. ಪುನೀತ್ ರಾಜಕುಮಾರ್ ಚಾರಿಟಬಲ್ ಟ್ರಸ್ಟ್ ಉದ್ವಾಟಿಸಿದ್ದಾರೆ.
ಅಲ್ಲದೇ, ಸಿದ್ದಗಂಗಾ ಮಠದ ಶಾಲಾ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರಿಗೆ ಉಚಿತ ನೇತ್ರ ತಪಾಸಣೆ ಹಾಗೂ ಕನ್ನಡಕ ವಿತರಿಸಿದ್ದಾರೆ.
ಈ ಸಮಾರಂಭದಲ್ಲಿ ಸಿದ್ದಗಂಗಾಮಠದ ಸಿದ್ದಲಿಂಗ ಸ್ವಾಮಿಜಿ ಹಾಗೂ ನಟ ದೊಡ್ಡಣ್ಣ, ವಿವಿಧ ಆಸ್ಪತ್ರೆಗಳ ಮುಖ್ಯಸ್ಥರು, ಮಠದ ವಿಧ್ಯಾರ್ಥಿಗಳು ಉಪಸ್ಥಿತಿ ಇದ್ದರು.