ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಸಂದರ್ಭದಲ್ಲೇ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಎಎಸ್ ಐ ಬಿದ್ದಿರುವ ಘಟನೆ ನಡೆದಿದೆ.
ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣಾ ಎಎಸ್ ಐ ವಿಜಯ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ. ಸೀಜ್ ಮಾಡಿದ್ದ ಆಟೋ ಬಿಡುಗಡೆ ಮಾಡಲು ಎಎಸ್ ಐ ವಿಜಯಕುಮಾರ್ 50 ಸಾವಿರ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಪೈಕಿ 40 ಸಾವಿರ ರೂ. ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಮಹಮ್ಮದ್ ಸುಜತ್ ಎಂಬ ಆಟೋ ಚಾಲಕನ ಬಳಿ ಬ್ರೋಕರ್ ಸಯ್ಯದ್ ರಿಜ್ವಾನ್ ಮೂಲಕ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಸದ್ಯ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.