ಬೆಳಗಾವಿ: ಜಿಲ್ಲೆಯಲ್ಲಿ ಇತ್ತೀಚೆಗಷ್ಟೇ ಎಸ್ ಡಿಎ ನೌಕಸ್ಥರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಈಗ ಎಎಸ್ ಐ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಐಗಳಿ ಪೋಲಿಸ್ ಠಾಣೆಯ ಎಎಸ್ ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಆತ್ಮಹತ್ಯೆಗೆ ಶರಣಾದವರು.
ಇವರು ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆದರೆ, ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.